ಐಪಿಎಲ್ ಪ್ರಸಾರ ಹಕ್ಕುಗಳಿಗಾಗಿ ಅಮೆಜಾನ್, ರಿಲಯನ್ಸ್, ಸೋನಿ ಪೈಪೋಟಿ: ವರದಿ ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಮುಂದಿನ ಆವೃತ್ತಿಯ ಪ್ರಸಾರ ಹಕ್ಕು ಖರೀದಿಗಾಗಿ ‘ಅಮೆಜಾನ್ ಡಾಟ್ ಕಾಂ’, ‘ದಿ ವಾಲ್ಟ್ ಡಿಸ್ನಿ ಕೊ’ ಹಾಗೂ ಕೋಟ್ಯಧಿ‍ಪತಿ ಮುಕೇಶ್ ಅಂಬಾನಿ ಒಡೆತನದ ‘ರಿಲಯನ್ಸ್ ಇಂಡಸ್ಟ್ರೀಸ್’ ಮಧ್ಯೆ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಉನ್ನತ ಮೂಲಗಳ ಮಾಹಿತಿ ಉಲ್ಲೇಖಿಸಿ ‘ಬ್ಲೂಮ್‌ಬರ್ಗ್’ ವರದಿ ಮಾಡಿದೆ. ಟಿ20 ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ಭಾರತ ಪರ ಫಿನಿಷರ್ ಆಗಬಲ್ಲರು: ಗವಾಸ್ಕರ್ ಈ ಕಂಪನಿಗಳ ಹೊರತಾಗಿ ‘ಸೋನಿ ಗ್ರೂಪ್’, ‘ಝೀ ಎಂಟರ್‌ಟೇನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್’, ‘ಡ್ರೀಮ್11’ ಕೂಡ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ಬಿಡ್ಡಿಂಗ್‌ಗೆ ಸಂಬಂಧಿಸಿದ ದಾಖಲೆಗಳನ್ನು ಖರೀದಿಸಿವೆ ಎಂದು ವರದಿ ಉಲ್ಲೇಖಿಸಿದೆ. ಪ್ರಸಾರ ಹಕ್ಕುಗಳ ಮಾರಾಟಕ್ಕೆ ಸಂಬಂಧಿಸಿ ಬಿಸಿಸಿಐಯ ಆಡಳಿತ ಮಂಡಳಿಯು ಜೂನ್‌ 12ರಿಂದ ಆನ್‌ಲೈನ್ ಹರಾಜು ಪ್ರಕ್ರಿಯೆ ಆರಂಭಿಸಲಿದೆ ಎನ್ನಲಾಗಿದೆ. ಡೆಲ್ಲಿ ತಂಡದ ಐವರು ಸಿಬ್ಬಂದಿಗೆ ಕೋವಿಡ್: ಬುಧವಾರದ ಪಂದ್ಯ ಮುಂಬೈಗೆ ಸ್ಥಳಾಂತರ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.