ಭಾರತ ವಿಶ್ವಕಪ್ ಗೆದ್ದು ಇಂದಿಗೆ 11 ವರ್ಷ: ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ನವದೆಹಲಿ: ಭಾರತ ಕ್ರಿಕೆಟ್‌ ತಂಡವು ಎಂ.ಎಸ್‌.ಧೋನಿ ಅವರ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದು ಇಂದಿಗೆ 11 ವರ್ಷಗಳು ಕಳೆದಿವೆ. 2011ರ ಏಪ್ರಿಲ್‌ 2 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಈ ಮೂಲಕ ಭಾರತ 2ನೇ ಬಾರಿಗೆ ವಿಶ್ವಕಪ್ ಗೆದ್ದು ಸಾಧನೆ ಮಾಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ನೆನಪುಗಳನ್ನು ಮೆಲುಕು ಹಾಕಿರುವ ಕ್ರೀಡಾಭಿಮಾನಿಗಳು ಧೋನಿ ಹಾಗೂ ಗಂಭೀರ್ ಜೋಡಿಯ ಆಟವನ್ನು ಸ್ಮರಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದಂತೆ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಭಾರತ 48.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಗೌತಮ್ ಗಂಭೀರ್ 97, ಎಂ.ಎಸ್‌.ಧೋನಿ ಔಟಾಗದೆ 91 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. 1983ರಲ್ಲಿ ಭಾರತ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದು ಸಾಧನೆ ಮಾಡಿತ್ತು. " - ! 28 , " 🙌 # 2011 👉 ://./T5S0VybogIpic../8EcC4904aj 11 #MSDhoni𓃵 #CricketWorldCup2011#worldcup2011## ../Qh6DQx5y1b " , . 28 " 🇮🇳 #Worldcup2011 @ 🧢 ../2RsB4LK2QJ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.