2022: ಸಿರಾಜ್ ದಾಖಲೆ ಸರಿಗಟ್ಟಿದ ಹರ್ಷಲ್ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತಿ ಹೆಚ್ಚು ಮೇಡನ್ ಓವರ್ (ಎರಡು) ಎಸೆದಿರುವ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್ ಪಟೇಲ್ ಸರಿಗಟ್ಟಿದ್ದಾರೆ. ತಮ್ಮದೇ ತಂಡದ ಸಹ ಆಟಗಾರ ಮೊಹಮ್ಮದ್ ಸಿರಾಜ್ ದಾಖಲೆಯನ್ನು ಸರಿಗಟ್ಟಿರುವ ಹರ್ಷಲ್, ಈ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿದ್ದಾರೆ. ಇದನ್ನೂ ಓದಿ: 2022: ಹಸರಂಗ ವಿಶಿಷ್ಟ ಶೈಲಿಯ ಸಂಭ್ರಮದ ಹಿಂದಿನ ಗುಟ್ಟೇನು? ಬುಧವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಲ್, ಸತತ ಎರಡು ಮೇಡನ್ ಓವರ್ ಎಸೆದಿದ್ದರು. ಅಲ್ಲದೆ ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 11 ರನ್ ನೀಡಿ ಎರಡು ವಿಕೆಟ್ ಕಬಳಿಸಿದ್ದರು. 🙌# #IPL2022 # # ../qB0K2DeUHJ ಕೆಕೆಆರ್ ತಂಡದ ಸ್ಫೋಟಕ ಬ್ಯಾಟರ್ ಆ್ಯಂಡ್ರೆ ರಸೆಲ್ ವಿಕೆಟ್ ಪಡೆಯುವ ಮೂಲಕ ಪಂದ್ಯಕ್ಕೆ ತಿರುವು ನೀಡಿದ್ದರು. ಈ ಹಿಂದೆ 2020ರಲ್ಲಿ ಅಬುಧಾಬಿಯಲ್ಲಿ ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಪರ ಸಿರಾಜ್ ಎರಡು ಮೇಡನ್ ಓವರ್ ಎಸೆದಿದ್ದರು. ಅಂದು ಸಿರಾಜ್, ಕೇವಲ ಎಂಟು ರನ್ ನೀಡಿ ಮೂರು ವಿಕೆಟ್ ಕಬಳಿಸಿದ್ದರು. - ! . .# # #IPL2022 # # ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.