ರಾಜಸ್ಥಾನ್ ಪರ 100ನೇ ಪಂದ್ಯದಲ್ಲಿ ವಿಶಿಷ್ಟ ದಾಖಲೆ ಬರೆದ ಸಂಜು ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸ್ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಕೀರ್ತಿಗೆ ನಾಯಕ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ. ರಾಜಸ್ಥಾನ್ ತಂಡದ ಪರ 100ನೇ ಪಂದ್ಯದಲ್ಲಿ ಸಂಜು ಈ ಸ್ಮರಣೀಯ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: 2022: ವಿರಾಟ್ ಕೊಹ್ಲಿ 600ಕ್ಕೂ ಹೆಚ್ಚು ರನ್ ಗಳಿಸಲಿದ್ದಾರೆ: ಡಿವಿಲಿಯರ್ಸ್ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಶೇನ್ ವಾಟ್ಸನ್ ದಾಖಲೆ ಮುರಿದಿರುವ ಸಂಜು, ಒಟ್ಟು 110 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಸಂಜು ಹಾಗೂ ವಾಟ್ಸನ್, ರಾಜಸ್ಥಾನ್ ಪರ 100ಕ್ಕೂ ಹೆಚ್ಚು ಸಿಕ್ಸರ್ ಸಿಡಿಸಿದ ಇಬ್ಬರು ಬ್ಯಾಟರ್‌ಗಳಾಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 27 ಎಸೆತಗಳನ್ನು ಎದುರಿಸಿದ ಸಂಜು ಐದು ಸಿಕ್ಸರ್ ನೆರವಿನಿಂದ 55 ರನ್ ಗಳಿಸಿದ್ದರು. ಈ ಮೂಲಕ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. 50 ! 100th . 💗 ../zy7gnmg3nD ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.