2022: ಶೆಲ್ಡನ್ ಜ್ಯಾಕ್ಸನ್ ಸ್ಟಂಪಿಂಗ್ ಮ್ಯಾಜಿಕ್; ಧೋನಿಗೆ ಹೋಲಿಸಿದ ಸಚಿನ್ ಮುಂಬೈ: ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿಕೆಟ್ ಕೀಪರ್ ಶೆಲ್ಡನ್ ಜಾಕ್ಸನ್ ವೇಗದ ಸ್ಟಂಪಿಂಗ್ ಮಾಡುವ ಮೂಲಕ ಮೋಡಿ ಮಾಡಿದ್ದಾರೆ. ಶನಿವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶೆಲ್ಡನ್ ತಮ್ಮ ವಿಕೆಟ್ ಕೀಪಿಂಗ್ ಕೌಶಲ್ಯವನ್ನು ಮೆರೆದಿದ್ದಾರೆ. ಇದರಿಂದ ಪ್ರಭಾವಿತರಾಗಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಜೊತೆಗೆ ಹೋಲಿಕೆ ಮಾಡಿದ್ದಾರೆ. .# # #IndianT20League # # ../5POQpnRJKI ವರುಣ್ ಚಕ್ರವರ್ತಿ ದಾಳಿಯಲ್ಲಿ ಉತ್ತಮವಾಗಿ ಆಡುತ್ತಿದ್ದ ರಾಬಿನ್ ಉತ್ತಪ್ಪ ಅವರನ್ನು ಹೊರದಬ್ಬುವಲ್ಲಿ ಜಾಕ್ಸನ್ ನೆರವಾದರು. ಪರಿಣಾಮ ಉತ್ತಮವಾಗಿ ಆಡುತ್ತಿದ್ದ ಉತ್ತಪ್ಪ ಪೆವಿಲಿಯನ್‌ಗೆ ಮರಳಬೇಕಾಯಿತು. ಐಪಿಎಲ್ 15ನೇ ಆವೃತ್ತಿಯಲ್ಲಿ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ರೋಚಕ ಕದನ ನಡೆಯುತ್ತಿದೆ. # ..👏❤# # # # # ../4CV4IxL1A4 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.