: ಆಲ್‌ರೌಂಡರ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಮರಳಿದ ಜಡೇಜ ದುಬೈ: ಐಸಿಸಿ ಟೆಸ್ಟ್ ಆಲ್‌ರೌಂಡರ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ರವೀಂದ್ರ ಜಡೇಜ ಅಗ್ರಸ್ಥಾನ ಮರಳಿ ಪಡೆದಿದ್ದಾರೆ. ವೆಸ್ಟ್‌ಇಂಡೀಸ್‌ನ ಜೇಸನ್ ಹೋಲ್ಡರ್ ಹಿಂದಿಕ್ಕಿರುವ ಜಡೇಜ ಬಳಿ ಒಟ್ಟು 385 ರೇಟಿಂಗ್ ಪಾಯಿಂಟ್ ಇದೆ. ಭಾರತದವರೇ ಆದ ರವಿಚಂದ್ರನ್ ಅಶ್ವಿನ್ ಮೂರನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ:- : ಬರುತ್ತಿದೆ ಆರ್‌ಸಿಬಿ ತಂಡಕ್ಕೊಂದು ಸ್ಪೂರ್ತಿ ಗೀತೆ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಾಯಕ ರೋಹಿತ್ ಶರ್ಮಾ, ಒಂದು ಸ್ಥಾನ ಕುಸಿದಿದ್ದು, ಏಳಕ್ಕೆ ತಲುಪಿದ್ದಾರೆ. ಟಾಪ್ 10ರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಅನುಕ್ರಮವಾಗಿ ಒಂಬತ್ತು ಹಾಗೂ 10ನೇ ಸ್ಥಾನ ಉಳಿಸಿಕೊಂಡಿದ್ದಾರೆ. 🔹 🔹 -’ @ ’ 📈 ➡ ://./ ../WYBZhDyN3A ಈ ವಿಭಾಗವನ್ನು ಆಸ್ಟ್ರೇಲಿಯಾದ ಮಾರ್ನಸ್ ಲಾಬುಶೇನ್ ಮುನ್ನಡೆಸುತ್ತಿದ್ದು, ಪಾಕಿಸ್ತಾನದ ನಾಯಕ ಬಾಬರ್ ಆಜಂ ಮೂರು ಸ್ಥಾನಗಳ ಏರಿಕೆ ಕಂಡು 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲೂ ರೋಹಿತ್ ಶರ್ಮಾ, ಒಂದು ಸ್ಥಾನ ಕುಸಿದಿದ್ದು, 4ನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತೀಯರ ಪೈಕಿ ಮುಂಚೂಣಿಯಲ್ಲಿರುವ ವಿರಾಟ್ ಕೊಹ್ಲಿ ಎರಡನೇ ಸ್ಥಾನ ಕಾಪಾಡಿಕೊಂಡಿದ್ದಾರೆ. ಏಕದಿನ ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬೂಮ್ರಾ, ಆರನೇ ಸ್ಥಾನ ಕಾಯ್ದುಕೊಂಡಿದ್ದಾರೆ. @ ’ : 🇿🇦 , 🇧🇩 - ➡ ://./ ../u1gNs0oZJU ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.