2022 : ಲಖನೌ ವಿರುದ್ಧ ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ಕೆ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇದೇ ಮೊದಲ ಬಾರಿಗೆ ಲಖನೌ ಸೂಪರ್ ಜೈಂಟ್ಸ್‌ ಮತ್ತು ಗುಜರಾತ್ ಟೈಟನ್ಸ್ ಐಪಿಎಲ್‌ಗೆ ಎಂಟ್ರಿ ಕೊಟ್ಟಿದೆ. # - ://./u8Y0KpnOQi # # ://./IwRUSZE08H ../uZfpKEI8A8 ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಲಖನೌಗೆ ಮತ್ತು ಬರೋಡಾದ ಹಾರ್ದಿಕ್ ಗುಜರಾತ್‌ಗೆ ನಾಯಕತ್ವ ವಹಿಸುತ್ತಿದ್ದಾರೆ. ಕ್ರಿಕೆಟ್‌ ವಲಯದಲ್ಲಿ ಆಪ್ತಮಿತ್ರರೆಂದೇ ಗುರುತಿಸಿಕೊಳ್ಳುವ ರಾಹುಲ್ ಮತ್ತು ಹಾರ್ದಿಕ್ ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿಯುತ್ತಿರುವುದು ಕುತೂಹಲ ಕೆರಳಿಸಿದೆ. # - ://./u8Y0KpnOQi # # ://./IwRUSZE08H ../uZfpKEI8A8 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.