2022 : ರೋಹಿತ್‌ ಶರ್ಮಾಗೆ ₹12 ಲಕ್ಷ ದಂಡ ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಎದುರು ಭಾನುವಾರ ಸಂಜೆ ನಡೆದ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಆಡಳಿತ ಮಂಡಳಿ ಈ ವಿಷಯ ತಿಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ, ಇಶಾನ್ ಕಿಶಾನ್ ಸ್ಫೋಟಕ ಅರ್ಧಶತಕದ (81*) ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 177 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. 2022 : ಮುಂಬೈಗೆ ಸೋಲಿನ ಆಘಾತ; ಡೆಲ್ಲಿ ಜಯಭೇರಿ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಹಂತದಲ್ಲಿ 13.2 ಓವರ್‌ಗಳಲ್ಲಿ 104 ರನ್ನಿಗೆ ಆರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಮುರಿಯದ ಏಳನೇ ವಿಕೆಟ್‌ಗೆ 30 ಎಸೆತಗಳಲ್ಲಿ 75 ರನ್‌ಗಳ ಜೊತೆಯಾಟ ಕಟ್ಟಿದ ಲಲಿತ್ ಯಾದವ್ ಹಾಗೂ ಅಕ್ಷರ್ ಪಟೇಲ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ಒದಗಿಸಿಕೊಡುವಲ್ಲಿ ನೆರವಾದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.