2022– ಕ್ರಿಕೆಟ್ | ಸೆಮಿಫೈನಲ್‌ ಪ್ರವೇಶಿಸಿದ ಭಾರತದ ಮಹಿಳೆಯರ ತಂಡ ಬೆಂಗಳೂರು: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳೆಯರ ಕ್ರಿಕೆಟ್‌ನಲ್ಲಿ ಬಾರ್ಬಡೋಸ್ ತಂಡವನ್ನು 100 ರನ್‌ಗಳಿಂದ ಮಣಿಸಿದ ಭಾರತ ತಂಡ, ಸೆಮಿಫೈನಲ್ ಪ್ರವೇಶಿಸಿದೆ. ಭಾರತದ ಪರ ರೇಣುಕಾ ಸಿಂಗ್ ನಾಲ್ಕು ವಿಕೆಟ್ ಗಳಿಸಿ ಮಿಂಚಿದರು. ಹರ್ಮನ್‌ಪ್ರೀತ್ ಕೌರ್, ರಾಧಾ ಯಾದವ್ ಮತ್ತು ಸ್ನೇಹ ರಾಣಾ ತಲಾ ಒಂದು ವಿಕೆಟ್ ಪಡೆಯುವ ಮೂಲಕ ತಂಡ ಸುಲಭ ಜಯ ಗಳಿಸಲು ನೆರವಾದರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಜೆಮ್ಮಿ ರೊಡ್ರಿಗಸ್ ಅವರ 56 ರನ್‌ಗಳ ನೆರವಿನಿಂದ ಒಟ್ಟು 162 ರನ್ ಗಳಿಸಿತ್ತು. 20 ಓವರ್‌ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡ ಬಾರ್ಬಡೋಸ್ ತಂಡ, 62 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಭಾರತ, ‘ಗ್ರೂಪ್ ಎ‘ಯಲ್ಲಿ ನಾಲ್ಕು ಅಂಕ ಮತ್ತು ಎರಡು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ. | ವೇಟ್‌ಲಿಫ್ಟಿಂಗ್‌ನಲ್ಲಿ ಮತ್ತೊಂದು ಪದಕ: ಗುರ್ದೀಪ್ ಸಿಂಗ್‌ಗೆ ಕಂಚು 6 ಅಂಕ ಗಳಿಸಿರುವ ಆಸ್ಟ್ರೇಲಿಯಾ, ಮೊದಲ ಸ್ಥಾನದಲ್ಲಿದೆ. ಶನಿವಾರ ಸೆಮಿಫೈನಲ್ ಪಂದ್ಯ ನಡೆಯಲಿದೆ. 2022 | ಜೂಡೊ: ತೂಲಿಕಾ ಮಾನ್‌ಗೆ ಬೆಳ್ಳಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.