ಕಪಿಲ್ ದೇವ್ ದಾಖಲೆ ಮುರಿದ ಬೂಮ್ರಾ; ಟೆಸ್ಟ್‌ನಲ್ಲಿ 100 ವಿಕೆಟ್ ಸಾಧನೆ ಲಂಡನ್: ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ. ದೀರ್ಘ ಪ್ರಕಾರದ ಕ್ರಿಕೆಟ್‌ನಲ್ಲಿ ಅತಿ ವೇಗದಲ್ಲಿ 100 ವಿಕೆಟ್ ಪಡೆದ ಭಾರತೀಯ ವೇಗದ ಬೌಲರ್ ಎಂಬ ಖ್ಯಾತಿಗೆ ಬೂಮ್ರಾ ಪಾತ್ರರಾಗಿದ್ದಾರೆ. ಕೇವಲ 24ನೇ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ 100 ವಿಕೆಟ್‌ಗಳ ಮೈಲುಗಲ್ಲು ತಲುಪಿದ್ದಾರೆ. ಈ ಮೂಲಕ ಮಾಜಿ ದಿಗ್ಗಜ ಕಪಿಲ್ ದೇವ್ ದಾಖಲೆಯನ್ನು ಮುರಿದಿದ್ದಾರೆ. ಕಪಿಲ್ 25 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.