ಸಚಿನ್ ತೆಂಡೂಲ್ಕರ್‌ಗೆ ಕೋವಿಡ್‌: ಮನೆಯಲ್ಲೇ ಪ್ರತ್ಯೇಕ ವಾಸ ನವದೆಹಲಿ: ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ‘ಕೋವಿಡ್‌ 19‘ ಸೋಂಕು ದೃಢಪಟ್ಟಿದ್ದು, ಸದ್ಯ ಅವರು ಮನೆಯಲ್ಲೇ ಪ್ರತ್ಯೇಕವಾಗಿದ್ದಾರೆ. ‘ಸಚಿನ್ ಇತ್ತೀಚೆಗೆ ಕೋವಿಡ್‌ 19 ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷೆಯ ವರದಿಯಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಚಿನ್ ಮನೆಯಲ್ಲಿ ಪ್ರತ್ಯೇಕವಾಗಿದ್ದು, ಕೋವಿಡ್‌ ನಿಯಮಗಳನ್ನು ಪಾಲಿಸುತ್ತಿದ್ದಾರೆ‘ ಎಂದು ಕುಟುಂಬದ ಆಪ್ತ ಮೂಲಗಳು ಶನಿವಾರ ಸುದ್ದಿ ಸಂಸ್ಥೆಗೆ ತಿಳಿಸಿವೆ. ಸಚಿನ್ ಅವರು ಇತ್ತೀಚೆಗೆ ರಾಯ್‌ಪುರದಲ್ಲಿ ನಡೆದ ರಸ್ತೆ ಸುರಕ್ಷತಾ ವಿಶ್ವ ಸರಣಿ ಚಾಲೆಂಜ್ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.