: 3ನೇ ಟಿ20: ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಅಹಮದಾಬಾದ್: ಇಲ್ಲಿ ನಡೆಯುತ್ತಿರುವ 3ನೇಟಿ–20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸೂರ್ಯಕುಮಾರ್ ಬದಲಿಗೆ ರೋಹಿತ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಗೆದ್ದಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸಮಬಲ ಸಾಧಿಸಿವೆ. ಇಂಗ್ಲೆಂಡ್ ತಂಡ: ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೋ, ಇಯಾನ್ ಮೋರ್ಗನ್ (ಕ್ಯಾಪ್ಟನ್), ಬೆನ್ ಸ್ಟೋಕ್ಸ್, ಸ್ಯಾಮ್ ಕರನ್, ಕ್ರಿಸ್ ಜೋರ್ಡನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್ ಭಾರತ ತಂಡ: ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ (ಕ್ಯಾಪ್ಟನ್), ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇದ್ರ ಚಹಾಲ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.