ರನ್ ಬರ ಎದುರಿಸುತ್ತಿರುವ 'ರನ್ ಮೆಷಿನ್'; ಕೊಹ್ಲಿ ಮತ್ತೆ ಶೂನ್ಯಕ್ಕೆ ಔಟ್! ಅಹಮದಾಬಾದ್: ಕಳಪೆ ಫಾರ್ಮ್‌ನಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಗದೊಮ್ಮೆ ಶೂನ್ಯಕ್ಕೆ ಔಟ್ ಆಗಿದ್ದಾರೆ. ಇದರೊಂದಿಗೆ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಈಗ ರನ್ ಬರ ಎದುರಿಸುತ್ತಿರುವುದು ಸಾಬೀತಾಗಿದೆ. ಅಹಮದಾಬಾದ್‌ನಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಕೇವಲ ಐದು ಎಸೆತಗಳನ್ನು ಎದುರಿಸಿದ ಕೊಹ್ಲಿ ಖಾತೆ ತೆರೆಯಲಾಗದೇ ಪೆವಿಲಿಯನ್‌ಗೆ ಮರಳಿದರು. 28th ' ( 12, 13, T20Is 3). 2nd ' & 3rd 5 ' . ' 37 , ' 23rd 2019. # ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ದಾಳಿಯಲ್ಲಿ ಕ್ರಿಸ್ ಜಾರ್ಡನ್‌ಗೆ ಕ್ಯಾಚಿತ್ತ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದರು. ಇದನ್ನೂ ಓದಿ: T20: ರೋಹಿತ್‌ಗೆ ವಿಶ್ರಾಂತಿ; ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಎರಡು ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಅಲ್ಲದೆ ಕೊನೆಯ ಟೆಸ್ಟ್ ಪಂದ್ಯದಲ್ಲೂ ರನ್ ಗಳಿಸುವಲ್ಲಿ ವಿಫಲವಾಗಿದ್ದರು. ಈ ಮೂಲಕ ಸತತವಾಗಿ ಎರಡನೇ ಅಂತರ ರಾಷ್ಟ್ರೀಯ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗಿದ್ದಾರೆ. ಅಲ್ಲದೆ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. : ://./8cswiRYiFg . : ../cVhaYJeSC6 : ' .# ../g9aI2c9jHL ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.