| 2 ನೇ ಟಿ 20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಅಹಮದಾಬಾದ್: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ 20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಶಿಖರ್ ಧವನ್ ಮತ್ತು ಆಕ್ಷರ್ ಪಟೇಲ್ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇಂಗ್ಲೆಂಡ್ ಪರ, ಮಾರ್ಕ್ ವುಡ್ ಬದಲಿಗೆ ಟಾಮ್ ಕರನ್ ಅವರಿಗೆ ಅವಕಾಶ ನೀಡಲಾಗಿದೆ. 11ನೇ ಓವರ್ ಅಂತ್ಯಕ್ಕೆ ಇಂಗ್ಲೆಂಡ್ 2 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿತ್ತು. ತಂಡಗಳು: ಭಾರತ: ಇಶಾನ್ ಕಿಶನ್, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ (ಕ್ಯಾಪ್ಟನ್), ರಿಷಭ್ ಪಂತ್ (ವಾರ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಾರ್ದುಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಲ್. ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್, ಇಯಾನ್ ಮೋರ್ಗನ್ (ನಾಯಕ), ಸ್ಯಾಮ್ ಕರನ್, ಟಾಮ್ ಕರನ್, ಜೋಫ್ರಾ ಆರ್ಚರ್, ಕ್ರಿಸ್ ಜೋರ್ಡನ್, ಆದಿಲ್ ರಶೀದ್. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.