T20: ಭಾರತ ತಂಡ ಪ್ರಕಟ, ಸಂಜು ಔಟ್, ಸೂರ್ಯಕುಮಾರ್‌ಗೆ ಚೊಚ್ಚಲ ಕರೆ ನವದೆಹಲಿ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ರಾತ್ರಿ ಪ್ರಕಟಿಸಿದೆ. ಸೂರ್ಯ ಕುಮಾರ್ ಯಾದವ್‌, ರಾಹುಲ್ ತೆವಾಟಿಯಾ ಹಾಗೂ ಇಶಾನ್ ಕಿಶನ್‌ಗೆ ಟೀಮ್‌ ಇಂಡಿಯಾದಿಂದ ಮೊದಲ ಬಾರಿ ಕರೆ ಬಂದಿದೆ. ಕನ್ನಡಿಗ ಮನೀಶ್ ಪಾಂಡೆಗೆ ಕೊಕ್: ಕನ್ನಡಿಗ ಮನೀಶ್ ಪಾಂಡೆ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ರಿಷಭ್ ಪಂತ್‌ ಅವರಿಗೆತಂಡದಲ್ಲಿ ಸ್ಥಾನ ದೊರೆತಿದೆ. ಸೂರ್ಯಕುಮಾರ್ ಯಾದವ್‌ ಕಳೆದ ಋತುವಿನ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಅದ್ಭುತ ಪ್ರದರ್ಶನ ನೀಡಿದ್ದರು. ತಂಡವು ಐದನೇ ಬಾರಿ ಐಪಿಎಲ್‌ ಟ್ರೋಫಿ ಎತ್ತಿಹಿಡಿಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಬೂಮ್ರಾ, ಜಡೇಜಾಗೆ ವಿಶ್ರಾಂತಿ: ಅನುಭವಿ ವೇಗಿ ಜಸ್‌ಪ್ರೀತ್ ಬೂಮ್ರಾ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಭುವನೇಶ್ವರ್ ವಾಪಸ್: ಗಾಯದಿಂದಾಗಿ ದೀರ್ಘ ಕಾಲ ತಂಡದಿಂದ ಹೊರಗಿದ್ದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರು ಮತ್ತೆ ತಂಡಕ್ಕೆ ಮರಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿವೆ. ಅಹಮದಾಬಾದ್‌ನ ಮೊಟೇರಾ ಕ್ರೀಡಾಂಗಣದಲ್ಲೇ ಎಲ್ಲ ಪಂದ್ಯಗಳು ಮಾರ್ಚ್‌ 12ರಿದ 20ರವರೆಗೆ ನಡೆಯಲಿವೆ. ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ.ಎಲ್.ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಒಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯಜುವೇಂದ್ರ ಚಾಹಲ್, ವರುಣ್ ಚಕ್ರಬವರ್ತಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ.ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ನವದೀಪ್, ಶಾರ್ದೂಲ್ ಠಾಕೂರ್ (), (), , , , , , (), (), , , , , , , , , , . ://./KkunRWtwE6 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.