2021: ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕನ್ನಡಿಗ ಸುಚಿತ್ ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಜಗದೀಶ ಸುಚಿತ್, ಗಾಳಿಯಲ್ಲಿ ಹಾರಿ ಎಡಗೈಯಲ್ಲಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿರುವ ಸುಚಿತ್, ಶನಿವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಜಾದೂ ಮೆರೆದರು. ಇದನ್ನೂ ಓದಿ:ಸಿಎಸ್‌ಕೆ ಸಿಬ್ಬಂದಿಗೆ ಧೋನಿ ಸೆಲ್ಯೂಟ್; ಅಭಿಮಾನಿಗಳ ಹೃದಯ ಗೆದ್ದ ಉತ್ತಪ್ಪ #IPL2021 # # ../6ekPnz7ff6 ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದರೂ ಬದಲಿ ಆಟಗಾರನಾಗಿ ಫೀಲ್ಡಿಂಗ್‌ಗಾಗಿ ಮೈದಾನಕ್ಕಿಳಿದ ಸುಚಿತ್, ಜೇಸನ್ ಹೋಲ್ಡರ್ ದಾಳಿಯಲ್ಲಿ ಗಾಳಿಯಲ್ಲಿ ಹಾರಿ ಎಡಗೈಯಲ್ಲಿ ಅದ್ಭುತ ಕ್ಯಾಚ್ ಹಿಡಿದರು. ಈ ಮೂಲಕ ಮೋಡಿ ಮಾಡಿದರು. ಪರಿಣಾಮ 13 ರನ್ ಗಳಿಸಿದ ದೀಪಕ್ ಹೂಡಾ ಔಟ್ ಆಗಿ ಪೆವಿಲಿಯನ್‌ನತ್ತ ಹೆಜ್ಜೆ ಹಾಕಬೇಕಾಯಿತು. # 💥💥💥💥#IPL2021 # ../eDAaktn89P ಇದೇ ಪಂದ್ಯದಲ್ಲಿ ಸಂದೀಪ್ ಶರ್ಮಾ ತಮ್ಮದೇ ದಾಳಿಯಲ್ಲಿ ರಿಟರ್ನ್ ಕ್ಯಾಚ್ ಹಿಡಿಯುವ ಮೂಲಕ ಮಿಂಚಿದರು. ../WMGtizo5xI : 👌 👌 - . 👍 👍 # # @ 🎥 🔽://./ELTuxOzm7T ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.