ಪುತ್ರಿಯ ತಂದೆಯಾದ ಉಮೇಶ್ ಯಾದವ್ ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಧ್ಯಮವೇಗಿ ಉಮೇಶ್ ಯಾದವ್ ಪತ್ನಿ ತಾನ್ಯಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಶುಕ್ರವಾರ ಉಮೇಶ್ ಯಾದವ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ’ನನ್ನ ಮನೆಗೆ ರಾಜಕುಮಾರಿ ಬಂದಿದ್ದಾಳೆ‘ ಎಂದು ಸಂದೇಶ ಇರುವ ಮಗುವಿನ ಪೋಸ್ಟರ್ ಹಾಕಿದ್ದಾರೆ. ಉಮೇಶ್ ಅವರನ್ನು ಬಿಸಿಸಿಐ ಅಭಿನಂದಿಸಿದೆ. ಆಸ್ಟ್ರೇಲಿಯಾದ ಎದುರಿನ ಎರಡನೇ ಟೆಸ್ಟ್‌ನಲ್ಲಿ ಗಾಯಗೊಂಡಿದ್ದ ಅವರು ಮೂರು ಮತ್ತು ನಾಲ್ಕನೇ ಟೆಸ್ಟ್‌ನಲ್ಲಿ ಆಡುವುದಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.