ಗಂಗೂಲಿ ಶೀಘ್ರ ಗುಣಮುಖರಾಗಲಿ: ಪ್ರಧಾನಿ ಮೋದಿ ಹಾರೈಕೆ ನವದೆಹಲಿ: ಲಘು ಹೃದಯಾಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಶನಿವಾರ ಗಂಗೂಲಿ ಅವರು ಕೋ್ಲ್ಕತ್ತದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆಂಜಿಯೊಪ್ಲಾಸ್ಟಿ ಮಾಡಲಾಗಿತ್ತು. ಅವರ ಹೃದಯಕ್ಕೆ ಒಂದು ಸ್ಟೆಂಟ್ ಅಳವಡಿಸಲಾಗಿತ್ತು. ಪ್ರಧಾನಿ ಮೋದಿಯವರು ಭಾನುವಾರ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದು. ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ’ಗಂಗೂಲಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಚೇತರಿಸಿಕೊಂಡಿದ್ದು ಮಾತನಾಡುತ್ತಿದ್ದಾರೆ‘ಎಂದು ವೈದ್ಯರು ತಿಳಿಸಿದ್ದಾರೆ. ಹೃದಯದ ಮೂರು ಪರಿಧಮನಿ ಅಪಧಮನಿಗಳಲ್ಲಿ ಕೊಬ್ಬಿನಂಶ ಶೇಖರಗೊಂಡಿತ್ತು. ಅದರಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡು ಲಘು ಹೃದಯಾಘಾತವಾಗಿತ್ತು ಎಂದು ಶನಿವಾರ ವೈದ್ಯರು ತಿಳಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.