: ಗಿಲ್, ಪೂಜಾರ ವಿಕೆಟ್ ಪತನ; ವಿರಾಮಕ್ಕೆ ಭಾರತ 90/3 ಮೆಲ್ಬೋರ್ನ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದ ಊಟದ ವಿರಾಮದ ಹೊತ್ತಿಗೆ ಭಾರತ ತಂಡವು, 37 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿದೆ. ಇನ್ನು ಏಳು ವಿಕೆಟ್ ಬಾಕಿ ಉಳಿದಿರುವಂತೆಯೇ ಮೊದಲ ಇನ್ನಿಂಗ್ಸ್ ಮುನ್ನಡೆಗಾಗಿ ಭಾರತ 105 ರನ್ ಗಳಿಸಬೇಕಾದ ಅಗತ್ಯವಿದೆ. ಈಗ ಕ್ರೀಸಿನಲ್ಲಿರುವ ನಾಯಕ ಅಜಿಂಕ್ಯ ರಹಾನೆ (10*) ಹಾಗೂ ಹನುಮ ವಿಹಾರಿ (13*) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಆಸೀಸ್‌ನ 195 ರನ್‌ಗಳಿಗೆ ಉತ್ತರವಾಗಿ 36/1 ಎಂಬಲ್ಲಿದ್ದ ಎರಡನೇ ದಿನದಾಟ ಮುಂದುವರಿಸಿದ ಭಾರತ ತಂಡವನ್ನು ಡೆಬ್ಯು ಓಪನರ್ ಶುಭಮನ್ ಗಿಲ್ ಹಾಗೂ ಚೇತೇಶ್ವರ ಪೂಜಾರ ಮುನ್ನಡೆಸಿದರು. ಆಸೀಸ್ ಫೀಲ್ಡರ್‌ಗಳು ಕ್ಯಾಚ್ ಕೈಚೆಲ್ಲುವುದರೊಂದಿಗೆ ಗಿಲ್‌ಗೆ ಅದೃಷ್ಟ ಸಾಥ್ ನೀಡಿತು. ಆದರೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಲ್ಲಿ ವಿಫಲವಾದರು. ಇದನ್ನೂ ಓದಿ:ಟಿಮ್ ಪೇನ್ ನಾಟೌಟ್ ತೀರ್ಪಿನ ಬಗ್ಗೆ ಟ್ವಿಟ್ಟರ್‌ನಲ್ಲಿ ಅಸಮಾಧಾನ ಸ್ಫೋಟ ಪ್ಯಾಟ್ ಕಮಿನ್ಸ್ ದಾಳಿಯಲ್ಲಿ ವಿಕೆಟ್ ಕೀಪರ್ ಟಿಮ್ ಪೇನ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. 65 ಎಸೆತಗಳನ್ನು ಎದುರಿಸಿದ ಗಿಲ್ ಎಂಟು ಬೌಂಡರಿಗಳಿಂದ 45 ರನ್ ಗಳಿಸಿದರು. ಈ ಮೂಲಕ ಪದಾರ್ಪಣೆ ಪಂದ್ಯದಲ್ಲಿ ಭರವಸೆ ಮೂಡಿಸಿದರು. ! ' !@ | # ../q4rFhCb7Yj ಇದಾದ ಬೆನ್ನಲ್ಲೇ ಅನುಭವಿ ಚೇತೇಶ್ವರ ಪೂಜಾರ ಅವರಿಗೂ ಕಮಿನ್ಸ್ ಪೆವಿಲಿಯನ್ ಹಾದಿ ತೋರಿಸಿದರು. 17 ರನ್ ಗಳಿಸಿದ ಪೂಜಾರಗೆ ಮಗದೊಮ್ಮೆ ನಿರಾಸೆ ಕಾದಿತ್ತು. ಬಳಿಕ ಜೊತೆಗೂಡಿದ ನಾಯಕ ಅಜಿಂಕ್ಯ ರಹಾನೆ ಹಾಗೂ ಹನುಮ ವಿಹಾರಿ ತಂಡವನ್ನು ಎಚ್ಚರಿಕೆಯಿಂದ ಮುನ್ನಡೆಸುತ್ತಿದ್ದಾರೆ. ಇದನ್ನೂ ಓದಿ: : ಮೊದಲ ದಿನದಾಟ ಆಸ್ಟ್ರೇಲಿಯಾ 195ಕ್ಕೆ ಆಲೌಟ್‌, ಭಾರತ 36/1 ಈ ಮೊದಲು ಮೊದಲ ದಿನದಾಟದಲ್ಲಿ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ (56ಕ್ಕೆ 4), ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (35ಕ್ಕೆ 3) ಹಾಗೂ ಡೆಬ್ಯು ವೇಗದ ಬೌಲರ್ ಮೊಹಮ್ಮದ್ ಸಿರಾಜ್ (40ಕ್ಕೆ 2) ನಿಖರ ದಾಳಿಯ ನೆರವಿನಿಂದ ಟೀಮ್ ಇಂಡಿಯಾವು, ಎದುರಾಳಿ ತಂಡವನ್ನು 195 ರನ್‌ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು. ಆಸೀಸ್ ಪರ ಮಾರ್ನಸ್ ಲಾಬುಷೇನ್ ಗರಿಷ್ಠ 48 ರನ್ ಗಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.