2021: ನಿಷೇಧದ ಭೀತಿಯಲ್ಲಿ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್! ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 33 ರನ್ ಅಂತರದ ಸೋಲಿಗೆ ಶರಣಾಗಿತ್ತು. ಇದರೊಂದಿಗೆ ನಿಧಾನಗತಿಯ ಓವರ್‌ರೇಟ್‌ಗಾಗಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೇಲೆ ₹24 ಲಕ್ಷ ದಂಡ ಹೇರಲಾಗಿದೆ. ಇದನ್ನೂ ಓದಿ: 2021 | : ಗೆಲುವಿನ ಓಟ ಮುಂದುವರಿಸಿದ ಡೆಲ್ಲಿ; ರಾಜಸ್ಥಾನ್‌ಗೆ ಸೋಲು ಗಾಯದ ಮೇಲೆ ಬರೆ ಎಳೆದಂತೆ ಸಂಜು ಸ್ಯಾಮ್ಸನ್ ನಿಷೇಧದ ಭೀತಿಯನ್ನು ಎದುರಿಸುತ್ತಿದ್ದಾರೆ. ಸತತ ಎರಡನೇ ಬಾರಿಗೆ ಓವರ್‌ರೇಟ್ ಕಾಯ್ದುಕೊಳ್ಳುವಲ್ಲಿ ಸಂಜು ವಿಫಲರಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲೂ ನಿಧಾನಗತಿಯ ಓವರ್‌ರೇಟ್‌ಗಾಗಿ ಸಂಜು ಮೇಲೆ ₹12 ಲಕ್ಷ ದಂಡ ವಿಧಿಸಲಾಗಿತ್ತು. ಐಪಿಎಲ್ ನಿಯಮಾವಳಿಗಳ ಪ್ರಕಾರ ಈಗ ಮೂರನೇ ಬಾರಿಯೂ ತಪ್ಪು ಪುನರಾವರ್ತನೆಯಾದರೆ ₹30 ಲಕ್ಷ ದಂಡ ಸಹಿತ ಮುಂದಿನ ಒಂದು ಪಂದ್ಯ ನಿಷೇಧ ಶಿಕ್ಷೆ ಎದುರಿಸಬೇಕಾಗುತ್ತದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.