ಕೋವಿಡ್‌: ಚೇತನ್ ಸಕಾರಿಯಾ ತಂದೆ ಸಾವು ರಾಜ್‌ಕೋಟ್‌: ಸೌರಾಷ್ಟ್ರದ ಯುವ ಕ್ರಿಕೆಟಿಗ ಚೇತನ್ ಸಕಾರಿಯಾ ಅವರ ತಂದೆ ಕಾಂಜಿಭಾಯಿ ಸಕಾರಿಯಾ (42) ಅವರು ಭಾನುವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅವರಿಗೆ ಸೋಂಕು ಖಚಿತಪಟ್ಟಿದ್ದರಿಂದ ಭಾವನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. 22 ವರ್ಷದ ಚೇತನ್, ಮುಂದೂಡಿಕೆಯಾಗಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಕಣಕ್ಕಿಳಿದಿದ್ದರು. ಸೌರಾಷ್ಟ್ರ ತಂಡದ ಪರ 15 ಪ್ರಥಮದರ್ಜೆ ಪಂದ್ಯಗಳನ್ನು ಆಡಿರುವ ಚೇತನ್‌, 41 ವಿಕೆಟ್‌ಗಳನ್ನು ಗಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.