ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬ್ರಿಟಿಷ್ ಹೈಕಮಿಷನರ್ ಭೇಟಿ ಬೆಂಗಳೂರು: ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಬುಧವಾರ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿದರು. ಅಕಾಡೆಮಿಯ ಕಾರ್ಯಕ್ರಮಗಳ ಕುರಿತು ತಿಳಿದುಕೊಂಡರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿವೃದ್ಧಿಪಡಿಸಲಾಗಿರುವ ಸೌರವಿದ್ಯುತ್ ವ್ಯವಸ್ಥೆ, ಮಳೆ ನೀರು ಸಂಗ್ರಹ ಮತ್ತು ಸಬ್‌ ಏರ್ ಸಿಸ್ಟಮ್‌ಗಳನ್ನು ವೀಕ್ಷಿಸಿದರು. ಆಟಗಾರರಿಗಾಗಿ ಇರುವ ಮೂಲಸೌಲಭ್ಯಗಳನ್ನು ನೋಡಿದರು. ಈ ಸಂದರ್ಭದಲ್ಲಿ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಜೆರೆಮಿ ಪಿಲ್ಮೊರ್ ಬೆಡ್‌ಫೋರ್ಡ್, ಕೆಎಸ್‌ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ಜೆ. ಅಭಿರಾಮ್, ಕಾರ್ಯದರ್ಶಿ ಸಂತೋಷ್ ಮೆನನ್, ಖಜಾಂಚಿ ವಿನಯ್ ಮೃತ್ಯುಂಜಯ, ಜಂಟಿ ಕಾರ್ಯದರ್ಶಿ ಶಾವೀರ್ ತಾರಾಪೂರ್ ಹಾಜರಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.