ಶ್ರೀಲಂಕಾ ಪ್ರವಾಸ: ಭಾರತ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಸಾಧ್ಯತೆ ಬೆಂಗಳೂರು: ಭಾರತ ಕ್ರಿಕೆಟ್ ತಂಡ ಕೈಗೊಳ್ಳಲಿರುವ ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ತೆರಳಲಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಹುಲ್ 2014ರಲ್ಲಿ ಭಾರತ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸದಲ್ಲಿ ಸಲಹೆಗಾರರಾಗಿ ತೆರಳಿದ್ದರು. ಶ್ರೀಲಂಕಾ ಜತೆಗೆ ಸೀಮಿತ ಓವರ್‌ಗಳ ಆರು ಪಂದ್ಯಗಳ ಸರಣಿ ನಡೆಯಲಿದೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದೊಂದಿಗೆ ರವಿ ಶಾಸ್ತ್ರಿ, ಭರತ್ ಅರುಣ್ ಮತ್ತು ವಿಕ್ರಂ ರಾಥೋರ್ ಇಂಗ್ಲೆಂಡ್‌ನಲ್ಲಿ ಇರಲಿದ್ದಾರೆ. 2019ರಲ್ಲಿ ರಾಹುಲ್ ದ್ರಾವಿಡ್ ನ್ಯಾಶನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಅಲ್ಲದೆ, 2015ರಿಂದ ಅಂಡರ್-19 ‘ಎ’ ತಂಡದ ಜತೆಗೆ ಕಾರ್ಯನಿರತರಾಗಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಎಬಿಡಿ ಪುನರಾಗಮನ ಇಲ್ಲ –ದಕ್ಷಿಣ ಆಫ್ರಿಕಾ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಜುಲೈ 2021ರಲ್ಲಿ ಪಂದ್ಯ ನಡೆಯುವ ಸಾಧ‌್ಯತೆಯಿದೆ. ಇದೇ ಅವಧಿಯಲ್ಲಿ ಇಂಗ್ಲೆಂಡ್ ಜತೆಗಿನ ಐದು ಪಂದ್ಯಗಳ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ನೇತೃತ್ವದ ತಂಡ ಇಂಗ್ಲೆಂಡ್‌ಗೆ ಪ್ರಯಾಣಿಸಲಿದೆ. | ಎಡಗೈ ವೇಗಿಗಳ ಹೆಜ್ಜೆ ಗುರುತು ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.