: ರಾಯಲ್ಸ್‌ ವಿರುದ್ಧ ಟಾಸ್‌ ಗೆದ್ದ ಕಿಂಗ್ಸ್‌, ಬೌಲಿಂಗ್‌ ಆಯ್ಕೆ ದುಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯ 32ನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಪಂಜಾಬ್ ಕಿಂಗ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲಿವೆ. ಸದ್ಯ ರಾಜಸ್ಥಾನ್‌ ವಿರುದ್ಧ ಟಾಸ್‌ ಗೆದ್ದಿರುವ ಪಂಜಾಬ್‌ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳಲ್ಲಿ ಸಿಡಿಲಬ್ಬರದ ಬ್ಯಾಟ್ಸ್‌ಮನ್‌ಗಳು ಇರುವುದರಿಂದ ರನ್‌ಗಳ ಹೊಳೆ ಹರಿಯುವ ನಿರೀಕ್ಷೆ ಮೂಡಿದೆ. ಕಿಂಗ್ಸ್‌ನಲ್ಲಿ ಕ್ರಿಸ್ ಗೇಲ್, ಕೆ.ಎಲ್. ರಾಹುಲ್, ಮಯಂಕ್ ಅಗರವಾಲ್ ಟೂರ್ನಿಯ ಮೊದಲ ಹಂತದಲ್ಲಿ ಅಮೋಘ ಲಯದಲ್ಲಿದ್ದರು. ರನ್‌ಗಳನ್ನು ಪೇರಿಸಿದ್ದರು. ರಾಯಲ್ಸ್‌ ತಂಡದಲ್ಲಿರುವ ಲಿಯಾಮ್ ಲಿವಿಂಗ್‌ಸ್ಟೋನ್, ಎವಿನ್ ಲೂಯಿಸ್ ಕೂಡ ಬಲಾಢ್ಯ ಬ್ಯಾಟ್ಸ್‌ಮನ್‌ಗಳೇ ಆಗಿದ್ದಾರೆ. ಪಂಜಾಬ್ ತಂಡದ ಆರಂಭಿಕ ಜೋಡಿ ರಾಹುಲ್ ಮತ್ತು ಮಯಂಕ್ ಅಗರವಾಲ್ ಅವರನ್ನು ನಿಯಂತ್ರಿಸುವುದು ರಾಜಸ್ಥಾನ್ ಬೌಲರ್‌ಗಳ ಮುಂದಿರುವ ಪ್ರಮುಖ ಹಾಗೂ ಕಠಿಣ ಸವಾಲು ಆಗಿದೆ. ಓದಿ... 2021 | : ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಜಸ್ಥಾನ್‌ ಉತ್ತಮ ಆರಂಭ # - ://./ # # ://./5dELKgsyhU ../YUfq6p3r96 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.