2021: - ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಫೀಲ್ಡಿಂಗ್ ಆಯ್ಕೆ ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಆರ್.ಅಶ್ವಿನ್ ಬದಲು ಇಶಾಂತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಆರ್‌ಸಿಬಿಯಲ್ಲಿ ರಜತ್ ಪತಿದಾರ್‌ಮತ್ತು ಡೇನಿಯಲ್ ಸ್ಯಾಮ್ಸ್ (ನವದೀಪ್ ಸೈನಿ ಮತ್ತು ಡೇನ್ ಕ್ರಿಶ್ಚಿಯನ್ ಬದಲಿಗೆ) ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. 22. ://./ # # #IPL2021 🚨 🚨@: .@: . 👉 ://./NQ9SSSBbVT# # ../Pf5MupXGlr ಎರಡೂ ತಂಡಗಳು ಒಟ್ಟು 5 ಪಂದ್ಯಗಳನ್ನಾಡಿದ್ದು ನಾಲ್ಕರಲ್ಲಿ ಜಯ ಗಳಿಸಿ ಒಂದರಲ್ಲಿ ಸೋಲನುಭವಿಸಿವೆ. ರನ್‌ರೇಟ್‌ನಲ್ಲಿ ತುಸು ಮೇಲಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ ಮೂರನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಎದುರು ಭಾನುವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ 69 ರನ್‌ಗಳ ಸೋಲು ಕಂಡಿತ್ತು. ಭಾನುವಾರ ನಡೆದ ಮತ್ತೊಂದು ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೂಪರ್ ಓವರ್‌ನಲ್ಲಿ ಮಣಿಸಿರುವ ಡೆಲ್ಲಿ ಆತ್ಮವಿಶ್ವಾಸದಲ್ಲಿದೆ. ಸುರಕ್ಷಿತವಾಗಿ ತವರಿಗೆ ಕಳುಹಿಸಿಕೊಡುತ್ತೇವೆ: ವಿದೇಶಿ ಆಟಗಾರರಿಗೆ ಬಿಸಿಸಿಐ ಭರವಸೆ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.