ಮೊಣಕಾಲು ನೋವು: ಟಿ. ನಟರಾಜನ್‌ಗೆ ಶಸ್ತ್ರಚಿಕಿತ್ಸೆ ನವದೆಹಲಿ: ಮೊಣಕಾಲು ನೋವಿನಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ತಂಡದ ವೇಗಿ ಟಿ. ನಟರಾಜನ್ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾದರು. ನೋವಿನ ಹಿನ್ನೆಲೆಯಲ್ಲಿ ಅವರು ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಐಪಿಎಲ್‌ನಲ್ಲಿನಟರಾಜನ್‌ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಾರೆ. ಈ ವರ್ಷದ ಆರಂಭದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಸರಣಿಯಲ್ಲಿ ಅವರು ಗಾಯಗೊಂಡಿದ್ದರು. ‘ನಾನು ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯಕೀಯ ತಂಡಕ್ಕೆ ಕೃತಜ್ಞನಾಗಿದ್ದೇನೆ. ಶುಭಕೋರಿದ ಬಿಸಿಸಿಐಗೂ ಋಣಿಯಾಗಿದ್ದೇನೆ‘ ಎಂದು ನಟರಾಜನ್ ಟ್ವೀಟ್ ಮಾಡಿದ್ದಾರೆ. ಯಾರ್ಕರ್ ಪರಿಣತ ನಟರಾಜನ್ ಈ ಬಾರಿಯ ಐಪಿಎಲ್‌ನಲ್ಲಿ ಕೇವಲ ಎರಡು ಪಂದ್ಯಗಳನ್ನು ಆಡಿದ್ದರು. , - , , , , . ’ @ . ../Z6pmqzfaFj ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.