ಕೋವಿಡ್ ಸಂಕಟ; ಪತ್ನಿಗೆ ಮುತ್ತು ಕೊಟ್ಟ ಸೂರ್ಯ; ಚಿತ್ರ ವೈರಲ್ ಅಹಮದಾಬಾದ್: ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯ ಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಶೆಟ್ಟಿಗೆ ಅಂತರ ಕಾಯ್ದುಕೊಂಡೇಮುತ್ತು ಕೊಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಚಿತ್ರವೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಪ್ರಸಂಗ ನಡೆದಿತ್ತು. ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಐಪಿಎಲ್‌ನಲ್ಲಿ ಕಟ್ಟುನಿಟ್ಟಿನ ಬಯೋಬಬಲ್ ವ್ಯವಸ್ಥೆಯನ್ನು ಪಾಲಿಸಲಾಗುತ್ತಿದೆ. ಈ ನಡುವೆ ಗಾಜಿನ ತಡೆಗೋಡೆಯ ಇನ್ನೊಂದು ಬದಿಯಲ್ಲಿರುವ ಪತ್ನಿಗೆ ಮುತ್ತು ಕೊಡುವ ಮೂಲಕ ತಮ್ಮ ಪ್ರೀತಿಯನ್ನು ಹಂಚಿದ್ದಾರೆ. ಇದನ್ನೂ ಓದಿ:34ನೇ ವರ್ಷಕ್ಕೆ ಕಾಲಿರಿಸಿದ ಹಿಟ್‌ಮ್ಯಾನ್ ದಾಖಲೆಗಳತ್ತ ಹದ್ದು ನೋಟ ಇಲ್ಲಿ ಐಪಿಎಲ್ ಬಯೋಬಬಲ್ ನಿಯಾಮಾವಳಿಯ ಉಲ್ಲಂಘನೆಯಾಗಿಲ್ಲ. ಪ್ರಸ್ತುತ ಚಿತ್ರವನ್ನು ಮುಂಬೈ ಇಂಡಿಯನ್ಸ್ ಕ್ರಿಕೆಟ್ ಕಾರ್ಯಾಚರಣೆಯ ನಿರ್ದೇಶಕಿ ಸಾಗರಿಕಾ ಘಾಟ್ಕೆ ಇನ್‌ಸ್ಟಾಗ್ರಾಂನಲ್ಲಿ ಹಂಚಿದ್ದಾರೆ. ಸೂರ್ಯ ಕುಮಾರ್ ಯಾದವ್ ಪತ್ನಿಗೆ ಮುತ್ತು ಕೊಡುತ್ತಿರುವ ದೃಶ್ಯವೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.