ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣ ಮೂರ್ತಿ ಅವರ ತಾಯಿ ಚೆಲುವಾಂಬ ನಿಧನ ಕಡೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣ ಮೂರ್ತಿ ಅವರ ತಾಯಿ ಚೆಲುವಾಂಬ ದೇವಿ (67) ಶನಿವಾರ ನಿಧನರಾದರು. ಇದೇ 20ರಂದು ಅವರಿಗೆ ಕೋವಿಡ್ ಧೃಡಪಟ್ಟಿತ್ತು. ಮನೆಯಲ್ಲಿಯೇ ಕ್ವಾರೆಂಟೈನ್ ಆಗಿ ದ್ದರು.ಅವರಿಗೆ ಪತಿ ಎಸ್.ಜಿ.ಕೆ‌.ಮೂರ್ತಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಶುಕ್ರವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಕೋವಿಡ್‌ ಮುಂಜಾಗ್ರತೆಯೊಂದಿಗೆ ತಾಲ್ಲೂಕು ಆಡಳಿತದ ವತಿಯಿಂದ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.