2021: ಐಪಿಎಲ್ ಬಳಿಕ ಆರ್‌ಸಿಬಿ ನಾಯಕತ್ವ ತೊರೆಯಲಿರುವ ಕಿಂಗ್ ಕೊಹ್ಲಿ ದುಬೈ: ಯುಎಇನಲ್ಲಿ ಪ್ರಸ್ತುತ ಸಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. #IPL2021 “ . ’ . .”: # # ../QSIdCT8QQM ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್‌ನಿಂದ ಟೀಮ್ ಇಂಡಿಯಾದ ನಾಯಕತ್ವ ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದರು. ಇದನ್ನೂ ಓದಿ: 2021: ಮುಗ್ಗರಿಸಿದ ಮುಂಬೈ, ಚೆನ್ನೈ ಜಯಭೇರಿ ಇದಾದ ಬೆನ್ನಲ್ಲೇ ಕೆಲಸದೊತ್ತಡವನ್ನು ನಿಭಾಯಿಸುವ ನಿಟ್ಟಿನಲ್ಲಿ ಆರ್‌ಸಿಬಿ ನಾಯಕತ್ವಕ್ಕೂ ರಾಜೀನಾಮೆ ನೀಡಲು ವಿರಾಟ್ ನಿರ್ಧರಿಸಿದ್ದಾರೆ. : @ # ../A8geqs7JNY ಈ ಕುರಿತು ವಿಡಿಯೊ ಸಂದೇಶದಲ್ಲಿ ವಿರಾಟ್ ಕೊಹ್ಲಿ ವಿವರಿಸಿದ್ದು, ಓರ್ವ ಆಟಗಾರನಾಗಿ ಆರ್‌ಸಿಬಿ ತಂಡದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಲ್ಲದೆ ತನ್ನಲ್ಲಿ ನಂಬಿಕೆಯನ್ನಿರಿಸಿ ಬೆಂಬಲಿಸಿದ ಎಲ್ಲ ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.