ನಿಧಾನಗತಿಯ ಬೌಲಿಂಗ್: ಎಂ.ಎಸ್. ಧೋನಿಗೆ ₹12 ಲಕ್ಷ ದಂಡ ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಎದುರು ಶನಿವಾರ ನಡೆದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಸಂಘಟಿಸಿದ್ದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಏಳು ವಿಕೆಟ್‌ಗಳಿಂದ ರಿಷಭ್ ಪಂತ್ ನಾಯಕತ್ವದ ತಂಡಕ್ಕೆ ಮಣಿದಿತ್ತು. ನಿಗದಿತ ಅವಧಿಯಲ್ಲಿ ಬೌಲಿಂಗ್‌ ಮುಕ್ತಾಯಗೊಳಿಸದೇ ಇರುವುದಕ್ಕೆ ಐಪಿಎಲ್‌ ನಿಯಮಾವಳಿಗಳ ಪ್ರಕಾರ ದಂಡ ವಿಧಿಸಲಾಗಿದೆ ಎಂದು ಟೂರ್ನಿಯ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.