ಬೌಲರ್‌ಗಳನ್ನು ದೂರಿದ ಮಹೇಂದ್ರ ಸಿಂಗ್ ಧೋನಿ ಮುಂಬೈ: ಐಪಿಎಲ್‌ ಟೂರ್ನಿಯಲ್ಲಿ ನಿರಾಸೆಯೊಂದಿಗೆ ಅಭಿಯಾನ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಸೋಲಿಗೆ ಬೌಲರ್‌ಗಳೇ ಕಾರಣ ಎಂದು ನಾಯಕ ಮಹೇಂದ್ರ ಸಿಂಗ್‌ ಧೋನಿ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ರಾತ್ರಿ ಪಂದ್ಯದ ನಂತರ ಮಾತನಾಡಿದ ಅವರು ಪರಿಸ್ಥಿತಿಗೆ ಹೊಂದಿಕೊಂಡು ದಾಳಿ ಸಂಘಟಿಸಲು ಬೌಲರ್‌ಗಳು ವಿಫಲರಾದರು. ಹೀಗಾಗಿ ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳು ಮೇಲುಗೈ ಸಾಧಿಸಿದರು. ಮುಂದಿನ ಪಂದ್ಯಗಳಲ್ಲಿ ತಂಡದ ಬೌಲಿಂಗ್ ಸುಧಾರಿಸಲಿದೆ’ ಎಂದರು. ‘ಬ್ಯಾಟ್ಸ್‌ಮನ್‌ಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಆದರೆ ಇನ್ನೂ 15ರಿಂದ 20 ಹೆಚ್ಚುವರಿ ರನ್ ಗಳಿಸಿದ್ದರೆ ಅನುಕೂಲ ಆಗುತ್ತಿತ್ತು. ಮಂಜಿನಿಂದ ಉಂಟಾಗುವ ಸಮಸ್ಯೆಯನ್ನು ನಿಭಾಯಿಸಲು ಬೌಲರ್‌ಗಳಿಗೆ ಸಾಧ್ಯವಾಗುತ್ತಿತ್ತು’ ಎಂದು ಅವರು ನುಡಿದರು. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲ ಬಾರಿ ಮುನ್ನಡೆಸಿದ ರಿಷಭ್ ಪಂತ್ ’ಟಾಸ್‌ಗಾಗಿ ಮಹೇಂದ್ರ ಸಿಂಗ್ ಧೋನಿ ಅವರೊಂದಿಗೆ ಪಿಚ್ ಬಳಿಗೆ ಹೆಜ್ಜೆ ಹಾಕಿದ್ದು ವಿಶಿಷ್ಟ ಅನುಭವವಾಗಿತ್ತು’ ಎಂದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.