ನಾಯಕನಾಗಿ ಪಂತ್ ಪದಾರ್ಪಣೆ; ಪಂದ್ಯಕ್ಕೂ ಮೊದಲು ಮಹಾನ್ ಆಟಗಾರನ ಭೇಟಿ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯಲ್ಲಿ ನಾಯಕರಾಗಿ ರಿಷಭ್ ಪಂತ್ ಪದಾರ್ಪಣೆ ಮಾಡಿದ್ದಾರೆ. ಈ ನಡುವೆ ಪಂದ್ಯಕ್ಕೂ ಮೊದಲು ತಮ್ಮ ಗುರು ಮಹೇಂದ್ರ ಸಿಂಗ್ ಧೋನಿ ಅವರನ್ನು ಭೇಟಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ನಾಯಕತ್ವ ಜವಾಬ್ದಾರಿಯನ್ನು ರಿಷಭ್ ಪಂತ್ ವಹಿಸುತ್ತಿದ್ದಾರೆ. ಅಲ್ಲದೆ ಮೊದಲ ಪಂದ್ಯದಲ್ಲೇ ತಮ್ಮ ಗುರು ಮಹೇಂದ್ರ ಸಿಂಗ್ ಧೋನಿ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ. # , @RishabhPant17 @ 💙💛 ' 👊🏻# # #IPL2021@ @ @cheteshwar1 ../ ಪಂದ್ಯದ ಮೊದಲು ರಿಷಭ್ ಪಂತ್ ಅವರು ಧೋನಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ವಿಡಿಯೊವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬಿಡುಗಡೆ ಮಾಡಿದೆ. ಧೋನಿ ಜೊತೆಗೆ ಸುರೇಶ್ ರೈನಾ ಹಾಗೂ ಚೇತೇಶ್ವರ ಪೂಜಾರ ಅವರನ್ನು ಭೇಟಿಯಾದ ರಿಷಭ್ ಪಂತ್ ಮಾತುಕತೆ ನಡೆಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.