ಆಸ್ಪತ್ರೆಯಿಂದ ಮನೆಗೆ ಸಚಿನ್ ತೆಂಡೂಲ್ಕರ್ ಮುಂಬೈ (ಪಿಟಿಐ): ಕೋವಿಡ್‌ನಿಂದ ಗುಣಮುಖರಾಗಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಗುರುವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಅವರು ಮನೆಯಲ್ಲಿ ಕೆಲವು ದಿನಗಳವರೆಗೆ ಪ್ರತ್ಯೇಕವಾಸದಲ್ಲಿ ಇರಲಿದ್ದಾರೆ. ‘ನಾನು ಮನೆಗೆ ಬಂದಿದ್ದೇನೆ. ಪ್ರತ್ಯೇಕವಾಸದಲ್ಲಿದ್ದು ವಿಶ್ರಾಂತಿ ಪಡೆಯಲಿದ್ದೇನೆ. ನಾನು ಗುಣಮುಖವಾಗುವಂತೆ ಶುಭ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು‘ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ಟ್ವೀಟ್ ಮಾಡಿದ್ದಾರೆ. ‘ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಸಿಬ್ಬಂದಿಗೆ ಧನ್ಯವಾದಗಳು. ಕಳೆದೊಂದು ವರ್ಷಕ್ಕೂ ಹೆಚ್ಚು ಕಾಲದಿಂದ ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿರುವ ಆರೋಗ್ಯ ಕಾರ್ಯಕರ್ತರ ಸೇವೆ ಅಭಿನಂದನೀಯ‘ ಎಂದೂ ಉಲ್ಲೇಖಿಸಿದ್ದಾರೆ. ಮಾರ್ಚ್ 27ರಂದು ಸಚಿನ್ ಗೆ ಕೋವಿಡ್ ಇರುವುದು ಖಚಿತವಾಗಿತ್ತು. ಏಪ್ರಿಲ್ 2ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.