ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಬೀದರ್: ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವಿದ್ಯಾರ್ಥಿ ವೇತನ ಯೋಜನೆಯಡಿ ಶಿಷ್ಯವೇತನ ಕೊಡಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ. ಒಂದನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಆರ್ಥಿಕ ಸಹಾಯ ಪಡೆಯಲು ಅರ್ಹರಿರುತ್ತಾರೆ. ಈ ಯೋಜನೆಯಡಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ₹ 30 ಸಾವಿರ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ₹ 60 ಸಾವಿರ ದೊರೆಯಲಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಗಳಿಗಾಗಿ .b4s.//ABCC1 ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ: @buddy4study. ಅಥವಾ ದೂ.ನಂ.011-43092240(268) ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.