ಎಸ್ಸೆಸ್ಸೆಲ್ಸಿ: ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ‍ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 28ರಿಂದ ಏಪ್ರಿಲ್‌ 11ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಅಥವಾ ಪೋಷಕರು ಜ.14ರವರೆಗೆ ಆಕ್ಷೇಪಗಳನ್ನು ಸಲ್ಲಿಸಬಹುದು. ಆಕ್ಷೇಪಗಳನ್ನು .... ಅಥವಾ ಇ–ಮೇಲ್‌ @. ಅಥವಾ ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು–560003 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಮಾರ್ಚ್‌ 28 ರಂದು ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯಲಿದೆ. 30ರಂದು ದ್ವಿತೀಯ ಭಾಷೆ, ಏ.1ಕ್ಕೆ ಅರ್ಥಶಾಸ್ತ್ರ, ಏ.4ಕ್ಕೆ ಗಣಿತ, ಏ.6ಕ್ಕೆ ಸಮಾಜ ವಿಜ್ಞಾನ, ಏ.8ಕ್ಕೆ ತೃತೀಯ ಭಾಷೆ, ಏ.11ಕ್ಕೆ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.