: ಸಶಸ್ತ್ರ ಪೊಲೀಸ್ ಪಡೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್‌) ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನುಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಿದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಫಲಿತಾಂಶ ನೋಡಬಹುದು. ಯುಪಿಎಸ್‌ಸಿಯುಅಕ್ಟೋಬರ್ 8ರಂದು ಸಿಎಪಿಎಫ್‌ ಅಸಿಸ್ಟಂಟ್ ಕಮಾಂಡಂಟ್ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ .. ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಮುಂದಿನ ಹಂತದಲ್ಲಿ ದೈಹಿಕ ಸಾಮರ್ಥ್ಯ ಹಾಗೂ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ಇನ್ನುದೈಹಿಕ ಸಾಮರ್ಥ್ಯ ಹಾಗೂ ವೈದ್ಯಕೀಯ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಆಯೋಗ ಪ್ರಕಟಿಸಿಲ್ಲ. ಇದರ ವೇಳಾಪಟ್ಟಿ ಪ್ರಕಟವಾದ ಒಂದು ವಾರದೊಳಗೆ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.