402 ಪಿಎಸ್ಐ ಹುದ್ದೆಗಳ ನೇಮಕಾತಿ; ಅಕ್ಟೋಬರ್‌ 26ರಿಂದ ದೈಹಿಕ ಸಾಮರ್ಥ್ಯ ಪರೀಕ್ಷೆ ಕರ್ನಾಟಕ ಪೊಲೀಸ್ ಇಲಾಖೆಯು 402 ಪಿಎಸ್‌ಐ ಹುದ್ದೆಗಳ ನೇಮಕಾತಿಯ ದೈಹಿಕ ಸಾಮರ್ಥ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ ’ಕೆಎಸ್‌ಪಿ’ಗೆ ಲಾಗಿನ್‌ ಆಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಣುತಾ ಪರೀಕ್ಷೆಯನ್ನು ಅಕ್ಟೋಬರ್‌ 26ರಿಂದ ನವೆಂಬರ್‌ 12 ರವರೆಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಸಲಾಗುವುದು. ಪ್ರವೇಶ ಪತ್ರದೊಂದಿಗೆ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಕೇಂದ್ರಗಳಲ್ಲಿ ಹಾಜರಿರಲು ಇಲಾಖೆ ಸೂಚಿಸಿದೆ. ವೆಬ್‌ಸೈಟ್‌ ವಿಳಾಸ:://psicivilnhk20.-. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.