: ಸಿಎಚ್‌ಎಸ್‌ಎಲ್‌ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಬರುವ ನವೆಂಬರ್‌ ತಿಂಗಳಲ್ಲಿ ಸಿಎಚ್‌ಎಸ್‌ಎಲ್‌ ನೇಮಕಾತಿಯ ಪರೀಕ್ಷೆ ನಡೆಸಲಿದೆ. ಈಗಾಗಲೇ ಪರೀಕ್ಷೆಯ ವೇಳಾಪಟ್ಟಿಯನ್ನು ಎಸ್‌ಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. 2019ನೇ ಸಾಲಿನ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದ ಪರೀಕ್ಷೆ ಇದಾಗಿದ್ದು, ಎಸ್‌ಎಸ್‌ಎಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ವೇಳಾಪಟ್ಟಿ... 1) ಕಂಬೈನ್ಡ್‌ ಸೆಕೆಂಡರಿ ಲೆವೆಲ್ ಪರೀಕ್ಷೆ(ಸಿಎಚ್‌ಎಸ್‌ಎಲ್‌). -03-11-2021 ಈ ಪರೀಕ್ಷೆ ವೇಳಾಪಟ್ಟಿ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕೊರೊನಾ ಪರಿಸ್ಥಿತಿಯ ನಿರ್ಧಾರಗಳಿಗೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ತುರ್ತು ಸಂದರ್ಭಗಳಲ್ಲಿ ಪರೀಕ್ಷೆ ವೇಳಾಪಟ್ಟಿ ಬದಲಾಗುವ ಸಾಧ್ಯತೆಗಳು ಇರುತ್ತವೆ ಎಂದು ಎಸ್‌ಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.