ಕೋವಿಡ್–19: ಜೆಇಇ ಪರೀಕ್ಷೆ ಮುಂದೂಡಿಕೆ ನವದೆಹಲಿ: ಕೋವಿಡ್–19 ಸಾಂಕ್ರಾಮಿಕ ಬಿಕ್ಕಟ್ಟಿನ ಕಾರಣ ಪ್ರಸಕ್ತ ಸಾಲಿನ ಜೆಇಇ (ಅಡ್ವಾನ್ಸ್ಡ್) ಪರೀಕ್ಷೆಯನ್ನು ಮುಂದೂಡಲಾಗಿದೆ. ಜುಲೈ 3ರಂದು ಪರೀಕ್ಷೆ ನಿಗದಿಯಾಗಿತ್ತು. ಕೋವಿಡ್ ಬಿಕ್ಕಟ್ಟಿನ ಕಾರಣ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಪರಿಷ್ಕೃತ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಐಐಟಿ ಖರಾಗ್‌ಪುರ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 2,08,921 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 4,157 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಓದಿ:-19 : ಇಳಿಕೆ ಕಂಡ ಹೊಸ ಪ್ರಕರಣಗಳ ಪ್ರಮಾಣ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.