ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ದಾಖಲಾತಿ ಪರಿಶೀಲನಾ ಪ್ರಕ್ರಿಯೆ ಆರಂಭ ಬೆಳಗಾವಿ: ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ 2020–21ನೇ ಸಾಲಿನ 2ನೇ ವರ್ಷದ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೂಲ ದಾಖಲಾತಿ ಪರಿಶೀಲನಾ ಕೇಂದ್ರವನ್ನು ಗುರುವಾರ ಉದ್ಘಾಟಿಸಲಾಯಿತು. ಪ್ರಭಾರ ಡಿಡಿಪಿಯು ರಾಜಶೇಖರ ಪಟ್ಟಣಶೆಟ್ಟಿ ಉದ್ಘಾಟಿಸಿ ಮಾತನಾಡಿ, ‘ವಿದ್ಯಾರ್ಥಿಗಳು ವೇಳಾಪಟ್ಟಿ ಪ್ರಕಾರ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು. ಕೋವಿಡ್ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಿ, ಸರದಿಯಲ್ಲಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು. ಈ ಪ್ರಕ್ರಿಯೆಯು ಡಿ. 12ರವರೆಗೆ ನಡೆಯಲಿದೆ’ ಎಂದು ತಿಳಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ರಾಜು ಜೋಶಿ, ಪ್ರಾಚಾರ್ಯ ಡಾ.ಆನಂದ ದೇಶಪಾಂಡೆ, ಕೆ.ಇ.ಎ. ನೋಡಲ್ ಅಧಿಕಾರಿ ರಾಜು ಬಸಣ್ಣವರ, ದಾಖಲೆಗಳ ಪರಿಶೀಲನಾಧಿಕಾರಿಗಳಾದ ಮಹೇಶ ಡೊಳ್ಳಿನ, ಚಂದ್ರಶೇಖರ ಇನಾಮದಾರ, ಡಿ. ಸತೀಶ, ಮಹಾವೀರ ಎಲಗುದರಿ, ಎಸ್.ವಿ. ಕೊಪ್ಪರದ, ವಿ.ವಿ. ಸವಣೂರ, ಸಂಜೀವ ನಾಯಿಕ ಹಾಗೂ ಸಂಯೋಜನಾಧಿಕಾರಿಗಳಾದ ಪ್ರೊ.ಮಹಾಂತೇಶ ಕಂಠಿ, ಡಾ.ಕಿರಣ ಪೋತದಾರ, ಪ್ರೊ.ಎಸ್.ಪಿ. ದೊಡಮನಿ, ಸಂತೋಷ ರಾವಲೂಚೆ ಇದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.