ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ಪ್ರಕಟ: ಪುಣೆಯ ಚಿರಾಗ್‌ ಫಾಲೊರ್‌ ಮೊದಲ ರ‍್ಯಾಂಕ್‌ ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್‌ ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗಿದ್ದು, ಪುಣೆಯ ಚಿರಾಗ್‌ ಫಾಲೊರ್‌ ಮೊದಲ ರ‍್ಯಾಂಕ್‌ ಪಡೆದಿದ್ದಾರೆ. ಗಂಗೂಲಾ ಭುವನ್‌ ರೆಡ್ಡಿ ಎರಡನೇ ರ‍್ಯಾಂಕ್‌ ಮತ್ತು ವೈಭವ್‌ ರಾಜ್‌ ತೃತೀಯ ರ‍್ಯಾಂಕ್‌ ಪಡೆದಿದ್ದಾರೆ. ಬಾಲಕಿಯರಲ್ಲಿ ಕನಿಷ್ಕಾ ಮಿತ್ತಲ್‌ ಮೊದಲ ರ‍್ಯಾಂಕ್‌ ಪಡೆದಿದ್ದಾರೆ. ದೇಶದ ಪ್ರತಿಷ್ಠಿತ 23 ಐಐಟಿಗಳಲ್ಲಿ ಎಂಜಿನಿಯರಿಂಗ್ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಈ ಬಾರಿ ಐಐಟಿ–ದೆಹಲಿ ನಡೆಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.