ಶಿಕ್ಷಕರನ್ನು ಕೋವಿಡ್‌ ಕೆಲಸದಿಂದ ಮುಕ್ತಗೊಳಿಸಿ: ಪುಟ್ಟಣ್ಣ ಒತ್ತಾಯ ಬೆಂಗಳೂರು: ‘ಎಸ್ಸೆಸ್ಸೆಲ್ಸಿಗೆ ಪರೀಕ್ಷಾ ಸಿದ್ಧತೆ ಹಾಗೂ ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ಆರಂಭವಾಗಿರುವುದರಿಂದ ಈ ಶಿಕ್ಷಕರನ್ನು ಕೋವಿಡ್‌–19 ಕರ್ತವ್ಯದಿಂದಮುಕ್ತಗೊಳಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ‘ಈ ಶಿಕ್ಷಕರು ಮತ್ತು ಉಪನ್ಯಾಸಕರು ಈಗಾಗಲೇ ಕೋವಿಡ್‌–19 ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಅವರು ವಿದ್ಯಾರ್ಥಿಗಳು ಮತ್ತು ಇತರ ಶಿಕ್ಷಕರ ಸಂಪರ್ಕಕ್ಕೆ ಬಂದಾಗ ಸೋಂಕು ಹರಡುವ ಅಪಾಯವೂ ಇದೆ. ಹೀಗಾಗಿ ತಕ್ಷಣ ಇವರನ್ನು ಕೋವಿಡ್‌ ಕರ್ತವ್ಯದಿಂದ ಮುಕ್ತಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.