ಜೂನ್‌ 25 ರಿಂದ ಪರೀಕ್ಷೆ: ವೇಳಾಪಟ್ಟಿ ಇಲ್ಲಿದೆ... ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ 25ರಿಂದ ಜುಲೈ 4ರವರೆಗೆ ನಡೆಯಲಿದ್ದು ವೇಳಾಪಟ್ಟಿ ಇಂತಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಜೂನ್‌ 25 ರಿಂದ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದರು. ಇಂಗ್ಲಿಷ್‌, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಒಂದೊಂದು ದಿನ ಅಂತರ ಇರುವ ಹಾಗೆ ನೋಡಿಕೊಂಡು ಪರೀಕ್ಷೆ ನಡೆಸಲಾಗುವುದು’ ಎಂದು ಹೇಳಿದ್ದರು. ಜೂನ್–25 (ಗುರುವಾರ): ದ್ವಿತೀಯ ಭಾಷೆ (ಕನ್ನಡ, ಇಂಗ್ಲಿಷ್‌ ) ಜೂನ್‌–26 (ಶುಕ್ರವಾರ): ಎಲಿಮೆಂಟ್ಸ್‌ ಆಫ್‌ ಮೆಕ್ಯಾನಿಕಲ್‌ ಆ್ಯಂಡ್‌ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್, ಎಂಜಿನಿಯರಿಂಗ್‌ ಗ್ರಾಫಿಕ್ಸ್‌,, ಎಲಿಮೆಂಟ್ಸ್‌ ಆಫ್‌ ಎಲೆಕ್ಸ್ರಾನಿಕ್ಸ್‌ ಎಂಜಿನಿಯರಿಂಗ್‌, ಎಲಿಮೆಂಟ್ಸ್ ಆಫ್‌ ಕಂಪ್ಯೂಟರ್‌ ಸೈನ್ಸ್‌,, ಅರ್ಥಶಾಸ್ತ್ರ ಜೂನ್‌–27(ಶನಿವಾರ): ಗಣಿತ, ಸಮಾಜಶಾಸ್ತ್ರ ಜೂನ್‌–29 (ಸೋಮವಾರ): ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ ಜುಲೈ‌–01 (ಬುಧವಾರ): ಸಮಾಜ ವಿಜ್ಞಾನ ಜುಲೈ–02 (ಗುರುವಾರ): ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ) ಜುಲೈ‌–03 (ಶುಕ್ರವಾರ): ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಹಾಗೂ ಎನ್‌ಎಸ್‌ಕ್ಯುಎಫ್‌ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌) ‘8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2,879 ಪರೀಕ್ಷಾಕೇಂದ್ರಗಳಲ್ಲಿ 43,720 ಕೊಠಡಿಗಳನ್ನು ಬಳಸಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ ಅಗತ್ಯ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು. ಜ್ವರದ ಲಕ್ಷಣ ಇರುವವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುವುದು’ ಎಮದು ಸುರೇಶ್‌ ಕುಮಾರ್ ಹೇಳಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.