ಪ್ರಥಮ ಪಿಯು: ನಾಳೆ ಫಲಿತಾಂಶ, ಮೇ 20ರಿಂದ ಪೂರಕ ಪರೀಕ್ಷೆ ಬೆಂಗಳೂರು: ಪ್ರಥಮ ಪಿಯು ಬೋರ್ಡ್‌ ಪರೀಕ್ಷೆಯ ಫಲಿತಾಂಶ ಶನಿವಾರ (ಮಾರ್ಚ್ 30) ಪ್ರಕಟವಾಗಲಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 20ರಿಂದ ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಪೂರಕ ಪರೀಕ್ಷೆ ನಡೆಸಲು ಆಯಾ ಜಿಲ್ಲಾ ಮಟ್ಟಗಳಲ್ಲಿ ಇಲಾಖೆಯ ಉಪ ನಿರ್ದೇಶಕರು ವ್ಯವಸ್ಥೆ ಮಾಡಿಕೊಳ್ಳಬೇಕು. ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಡಳಿ ಸೂಚಿಸಿದೆ. ಪರೀಕ್ಷೆಗಳು ಮೇ 20ರಿಂದ 30ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಏ.20 ಕೊನೆಯ ದಿನ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.