ವಸತಿ ಶಾಲೆ: ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಬೆಂಗಳೂರು: ಮೊರಾರ್ಜಿ, ಕಿತ್ತೂರು ರಾಣೆ ಚೆನ್ನಮ್ಮ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳವಾರ ಪ್ರಕಟಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಪ್ರವೇಶಕ್ಕೆ ಪರೀಕ್ಷೆ ಬರೆದಿದ್ದ 1.98 ಲಕ್ಷ ವಿದ್ಯಾರ್ಥಿಗಳ ಜಿಲ್ಲಾವಾರು ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸೀಟ್‌ ಮಾಟ್ರಿಕ್ಸ್‌ ವಿವರಗಳನ್ನು ಸಲ್ಲಿಸಿದ ನಂತರ ವಸತಿ ಶಾಲಾವಾರು ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಕೆಎಇ ಹೇಳಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.