ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸ್ಕಾಲರ್‌ಶಿಪ್ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ: ಪ್ರಸ್ತುತ 9 ರಿಂದ 12ನೇ ತರಗತಿಗಳಲ್ಲಿ ಓದುತ್ತಿರುವ ಅಥವಾ ಯಾವುದೇ ಸರ್ಕಾರಿ/ಖಾಸಗಿ ಮುಕ್ತ ಶಾಲೆಗಳು ಅಥವಾ ಮುಕ್ತ ವಿಶ್ವವಿದ್ಯಾಲಯಗಳಿಂದ ಯು.ಜಿ./ಪಿ.ಜಿ. (/) ಕೋರ್ಸ್‌ಗಳನ್ನು ಮಾಡುತ್ತಿರುವ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ 50ರಷ್ಟು ಅಂಕಗಳನ್ನು ಗಳಿಸಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹10,00,000 ಮೀರಬಾರದು. ಆರ್ಥಿಕ ಸಹಾಯ: ₹ 40,000 ವರೆಗೆ ಸ್ಕಾಲರ್‌ಶಿಪ್ ಅರ್ಜಿ ಸಲ್ಲಿಸಲು ಕೊನೆ ದಿನ: 30-04-2024 ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ: : .b4s.//USFB1 ಯೂನಿವರ್ಸಿಟಿ ಆಫ್ ಕೆಂಟ್ ಇಂಡಿಯಾ ವುಮೆನ್ ಇನ್ ಲೀಡರ್‌ಶಿಪ್ ಯೂನಿವರ್ಸಿಟಿ ಆಫ್ ಕೆಂಟ್ ಇಂಡಿಯಾ ಮಹಿಳೆಯರಿಗೆ ನೀಡುವ ಅವಕಾಶವಾಗಿದೆ. ಅರ್ಹತೆ: ಭಾರತ ಮೂಲದ ಮಹಿಳಾ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಅರ್ಜಿದಾರರು ಸ್ನಾತಕೋತ್ತರ ಪದವಿ ಕೋರ್ಸ್‌ಗೆ ಗಡುವಿನೊಳಗೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿರಬೇಕು. ಆರ್ಥಿಕ ಸಹಾಯ: ಒಂದು ವರ್ಷದ ಅಧ್ಯಯನಕ್ಕಾಗಿ ಬೋಧನಾ ಶುಲ್ಕ ಶೇ 50ರಷ್ಟು. ಅರ್ಜಿ ಸಲ್ಲಿಸಲು ಕೊನೆ ದಿನ: 24-05-2024 ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ. ಮಾಹಿತಿಗೆ: : .b4s.//LPUK1 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.