ಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿ ಪರೀಕ್ಷೆ ಬೆಂಗಳೂರು: 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಾಂಕನ/ಎಸ್‌ಎ–2) ಮಾರ್ಚ್‌ 11ರಿಂದ ಆರಂಭವಾಗಲಿವೆ. 5ನೇ ತರಗತಿಗೆ ಮಾರ್ಚ್‌ 11ರಿಂದ 14ರವರೆಗೆ, 8 ಹಾಗೂ 9ನೇ ತರಗತಿಗೆ ಮಾರ್ಚ್‌ 11ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಹೇಳಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ ://... ನಲ್ಲಿ ಪ್ರಕಟಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.