ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಪೊಲೀಸ್ ಆಗಬೇಕಾದರೆ ಏನು ಮಾಡಬೇಕು? (ಸಿದ್ದೇಶ್‌, ಕೊಪ್ಪಳ) ಪೊಲೀಸ್ ಆಗಬೇಕಾದರೆ ಏನು ಮಾಡಬೇಕು? (ಪ್ರದೀಪ್‌ ಕುಮಾರ್‌ ವಿ) ನಮ್ಮ ಸಮಾಜದಲ್ಲಿ ನೆಮ್ಮದಿ ಮತ್ತು ಶಾಂತಿಯ ಸ್ಥಾಪನೆಗಾಗಿ ಹಗಲಿರುಳೂ ಪೊಲೀಸ್ ಇಲಾಖೆ ಶ್ರಮಿಸುತ್ತದೆ. ಈ ನಿಟ್ಟಿನಲ್ಲಿ, ಇಲಾಖೆಯ ಉದ್ಯೋಗಿಗಳು ಸಂದರ್ಭಕ್ಕೆ ತಕ್ಕಂತೆ ಸ್ವಯಂ-ಪ್ರೇರಿತರಾಗಿ ಅಥವಾ ಮೇಲಧಿಕಾರಿಗಳ ಸೂಚನೆ/ಆದೇಶದಂತೆ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ. ಹಾಗಾಗಿ, ನಿಗದಿತ ವೇಳೆಯಲ್ಲಿಯೇ ಕೆಲಸ ಮಾಡುವ ಪರಿಪಾಠ ಎಲ್ಲಾ ಸಂದರ್ಭದಲ್ಲೂ ಕಾರ್ಯಸಾಧ್ಯವಲ್ಲ. ಆದ್ದರಿಂದ, ವೃತ್ತಿ ಮತ್ತು ವೈಯಕ್ತಿಕ ಬದುಕಿನಲ್ಲಿ ಸಮತೋಲನವನ್ನು ಸಾಧಿಸಬೇಕಾದರೆ ವೃತ್ತಿಯಲ್ಲಿ ಆಸಕ್ತಿ, ಅಭಿರುಚಿ, ಕೌಶಲಗಳ ಜೊತೆಗೆ ಕುಟುಂಬದ ಬೆಂಬಲ ಇರಬೇಕು. ಪೊಲೀಸ್ ಕಾನ್‌ಸ್ಟೆಬಲ್ ಆಗಲು ಅಭ್ಯರ್ಥಿಗಳು ಸರ್ಕಾರಿ ಮಾನ್ಯತೆ ಪಡೆದ ಶಾಲೆ/ಕಾಲೇಜಿನಿಂದ ಪಿಯುಸಿ/ತತ್ಸಮಾನ ಕೋರ್ಸ್‌ನಲ್ಲಿ ತೇರ್ಗಡೆಯಾಗಿರಬೇಕು. ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷದ ಒಳಗಿರಬೇಕು. ನಾಯಕತ್ವದ ಕೌಶಲ, ದಿಟ್ಟತನ, ಸಹಭಾಗಿತ್ವದ ಕೌಶಲ, ಉತ್ತಮ ಸಂವಹನ, ಪರಿಶೋಧನಾ ಕೌಶಲ, ಸಮಸ್ಯೆಗಳನ್ನು ಪರಿಹರಿಸುವ ಕೌಶಲಗಳ ಜೊತೆ ಸಕಾರಾತ್ಮಕ ಧೋರಣೆಯಿರಬೇಕು; ಹಾಗೂ, ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಬೇಕು. ಈ ವೃತ್ತಿ ನಿಮಗೆ ಒಪ್ಪುತ್ತದೆಯೇ ಎಂದು ಖಚಿತವಾಗಬೇಕು. ಯಾವುದಾದರೂ ಪದವಿ ಕೋರ್ಸ್ನಲ್ಲಿ ತೇರ್ಗಡೆಯಾದ ನಂತರ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಹುದ್ದೆಗೆ ಅರ್ಹತೆ ಸಿಗುತ್ತದೆ. ಎಲ್ಲಾ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆಗಳ ಮೂಲಕ ನಡೆಯುತ್ತದೆ. ಕರ್ನಾಟಕ ಪೊಲೀಸ್ ನೇಮಕಾತಿ ಪ್ರಕ್ರಿಯೆ, ಪರೀಕ್ಷೆಗಳ ವಿವರ ಮತ್ತು ವಿಷಯಸೂಚಿಗೆ ಗಮನಿಸಿ: ://apc420.-./ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.