ಜುಲೈ ಮೊದಲ ವಾರದಲ್ಲಿ - ಪರೀಕ್ಷೆ ಸಾಧ್ಯತೆ ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ () ಸ್ನಾತಕೋತ್ತರ ಜುಲೈ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ( () ಈ ವರ್ಷ ನಡೆಯುವುದಿಲ್ಲ ಎಂದು ಮೂಲಗಳು ಶನಿವಾರ ತಿಳಿಸಿವೆ. ನೀಟ್-ಪಿಜಿ ಪರೀಕ್ಷೆ ಜುಲೈ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿದ್ದು, ಆಗಸ್ಟ್ ಮೊದಲ ವಾರದಲ್ಲಿ ಕೌನ್ಸೆಲಿಂಗ್ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದೆನ್ನಲಾಗಿದೆ. ನೀಟ್-ಪಿಜಿ ಪರೀಕ್ಷೆಯು ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019ರ ಅಡಿಯಲ್ಲಿ ವಿವಿಧ ಎಂಡಿ/ಎಂಎಸ್‌ ಮತ್ತು ಪಿಜಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ನಡೆಸುವ ಅರ್ಹತಾ ಮತ್ತು ರ್ಯಾಂಕಿಂಗ್ ಪರೀಕ್ಷೆಯಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.