ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಕಾರವಾರ: ಅಂಚೆ ಇಲಾಖೆ ವತಿಯಿಂದ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ (ಫಿಲಾಟೆಲಿ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ ಸ್ಪರ್ಶ್ ಯೋಜನೆ ಅಡಿ ವಿದ್ಯಾರ್ಥಿ ವೇತನಕ್ಕೆ 6 ರಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಅಧಿಕ ಅಂಕಗಳಿಸಿ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಸದಸ್ಯರಾಗಿರುವ ವಿದ್ಯಾರ್ಥಿಗಳು ಸೆಪ್ಟೆಂಬರ್ 3ರ ಒಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ವೆಬ್‍ಸೈಟ್ ... ಅಥವಾ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾರವಾರ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಧನಂಜಯ ಆಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.